Yashasvini Yojana : ಯಶಸ್ವಿನಿ ಯೋಜನೆ ಮರು ಜಾರಿಗೆ ಸರ್ಕಾರ ಅಸ್ತು. ನವೆಂಬರ್ 1 – 2022 ರಿಂದ ಆರಂಭವಾಗಿದೆ : ರೈತರ ಮೊಗದಲ್ಲಿ ಸಂತಸ.
Yashasvini Yojana : ಕರ್ನಾಟಕದ ರೈತರಿಗೆ ಬಹಳ ಪ್ರಯೋಜನಕಾರಿಯಾಗಿದ್ದ ಯಶಸ್ವಿನಿ ಯೋಜನೆಯನ್ನು ಸರ್ಕಾರ ಇತ್ತೀಚಿಗೆ ಮರು ಜಾರಿಗೊಳಿಸಿರುವುದು ರೈತರಿಗೆ ಖುಷಿ ತಂದಿದೆ. 2003 ರಲ್ಲಿ ಈ ಯೋಜನೆಯನ್ನು ರೈತರಿಗೆ ವೈದ್ಯಕೀಯ ಸೌಲಭ್ಯ ಒದಗಿಸುವ ಸಲುವಾಗಿ ರಾಜ್ಯದಲ್ಲಿ ಜಾರಿಗೆ ತರಲಾಗಿತ್ತು. ಆದರೆ ಕಾರಣಾಂತರಗಳಿಂದ ಯಶಸ್ವಿನಿ ಯೋಜನೆಯು 2018ರಲ್ಲಿ ರದ್ದಾಗಿತ್ತು. ಇದೀಗ ಮತ್ತೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ, ಯಶಸ್ವಿನಿ ಯೋಜನೆಯಲ್ಲಿ ಚಿಕ್ಕ ಪುಟ್ಟ ಸುಧಾರಣೆಗಳನ್ನು ಅಳವಡಿಸಿ ಮತ್ತೆ ಮರು ಜಾರಿಗೊಳಿಸುವ ನಿರ್ಧಾರ ಕೈಗೊಂಡಿದೆ. ಹಿಂದಿನ ಬಜೆಟ್‍ನಲ್ಲಿ ಈ ಯೋಜನೆಯನ್ನು ಮತ್ತೆ ಜಾರಿಗೊಳಿಸುವ ಬಗ್ಗೆ ಬಿಜೆಪಿ ಸರ್ಕಾರ ಗಮನ ಸೆಳೆದಿತ್ತು. ಇದೀಗ, ತಮ್ಮ ಯೋಜನೆಯನ್ನು ಅನುಷ್ಠಾನಗೊಳಿಸಲು, ಪರಿಶ್ಕೃತಗೊಳಿಸಿದ ಯಶಸ್ವಿನಿ ಯೋಜನೆಗೆ ಕರ್ನಾಟಕ ಸರ್ಕಾರ 300 ಕೋಟಿ ರೂ. ನಿಗದಿ ಪಡಿಸಿದೆ. ಇದೀಗ, ಮುಂಬರುವ ನವೆಂಬರ್ 1 ರಿಂದಲೇ ಈ ಯೋಜನೆಯ ಲಾಭ ಪಡೆಯಬಯಸುವವರು ಸದಸ್ಯತ್ವ ನೋಂದಣಿ ಮಾಡಿಸಿಕೊಳ್ಳಬಹುದು.
ಅಷ್ಟಕ್ಕೂ ಈ ಯೋಜನೆಯ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಈ ಯೋಜನೆಯಲ್ಲಿ ನೋಂದಾಯಿತ ಕುಟುಂಬವೊಂದು ಸುಮಾರು ಐದು ಲಕ್ಷವರೆಗೆ ನಗದು ರಹಿತ ಚಿಕಿತ್ಸೆ ಪಡೆಯುವ ಅವಕಾಶವಿದೆ.
ಇದರ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಟ್ವೀಟ್ ಮಾಡಿದ್ದಾರೆ. “ಈ ಹಿಂದೆ ಬಜೆಟ್ ನಲ್ಲಿ ಘೋಷಿಸಿದಂತೆ, ರಾಜ್ಯದ ರೈತರಿಗೆ ವರದಾನವಾಗಿದ್ದ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೊಳಿಸುವಂತೆ ಆದೇಶ ಹೊರಡಿಸಲಾಗಿದೆ. ಹಾಗೆಯೇ, ಆರಂಭಿಕ ಹಂತದಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಸುಮಾರು 300 ಕೋಟಿ ರೂಪಾಯಿಗಳನ್ನು ನಮ್ಮ ಸರ್ಕಾರ ಮೀಸಲಿರಿಸಿದೆ” ಎಂದು ಮಾನ್ಯ ಮುಖ್ಯಮಂತ್ರಿಯವರು ಹೇಳಿದ್ದಾರೆ.
Karnataka Government Schemes For Agriculture : ರೈತರ ಬೆಳೆ ವಿಮೆ ಪರಿಹಾರ ಹಣ ಜಮೆ: ನಿಮ್ಮ ಅಕೌಂಟ್ ಗೂ ಹಣ ಬಂದಿದೆಯೇ ಎನ್ನುವುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಇದೆ ತರಹದ ಕೃಷಿಗೆ ಸಂಬಂಧ ಪಟ್ಟಂತಹ ಮತ್ತಷ್ಟು ಮಾಹಿತಿಗಾಗಿ ನಮ್ಮ ನೇಗಿಲ ಯೋಗಿ ಅಪ್ ಡೌನ್ಲೋಡ್ ಮಾಡಿ.
ಮತ್ತು ಕೃಷಿ ಗೆ ಸಂಬಂಧಿಸಿದಂತಹ ಎಲ್ಲ ಬಗೆಯ ಮಹಿತಿಯನ್ನ ತಕ್ಷಣಕ್ಕೆ ನಿಮ್ಮ ಮೊಬೈಲ್ ನಲ್ಲಿಯೇ ಪಡೆದುಕೊಳ್ಳಿ